ಮೈಸೂರುರಾಜಕೀಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಿದ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ.*

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿದರು.

ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಮೈಸೂರು ಜಿಲ್ಲಾಡಳಿತದ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು, ವಿವಿಧ ಕಾರ್ಯಕ್ರಮಗಳ ಆಯೋಜನೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ಸೌಹಾರ್ದಯುತವಾಗಿ ಚರ್ಚಿಸಿದರು.

ದಸರಾ ಮಹೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವೈಭವದಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಶ್ರೀ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಶ್ರೀಮತಿ ಸೀಮಾ ಲಾಟ್ಕರ್ ಸೇರಿದಂತೆ ಮೈಸೂರು ಜಿಲ್ಲಾಡಳಿತದ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

admin

National Nandi News – ಕನ್ನಡದ ನೇರ, ನಿಖರ ಮತ್ತು ವಿಶ್ವಾಸಾರ್ಹ ಸುದ್ದಿ National Nandi News ಕನ್ನಡ ಭಾಷೆಯಲ್ಲಿ ಕರ್ನಾಟಕ, ಭಾರತ ಮತ್ತು ವಿಶ್ವದ ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದೆ ತರುವ ಹೊಸ ಕನ್ನಡ ನ್ಯೂಸ್ ಚಾನೆಲ್. ನಮ್ಮ ಚಾನೆಲ್‌ನಲ್ಲಿ: 🔴 ಕರ್ನಾಟಕದ ಪ್ರಮುಖ ಸುದ್ದಿಗಳು 🔴 ಬ್ರೇಕಿಂಗ್ ನ್ಯೂಸ್ & ಲೇಟೆಸ್ಟ್ ಅಪ್‌ಡೇಟ್ಸ್ 🔴 ರಾಜಕೀಯ ಮತ್ತು ಸಾರ್ವಜನಿಕ ವಿಚಾರಗಳು 🔴 ಅಪರಾಧ ಮತ್ತು ಕಾನೂನು ಸುದ್ದಿಗಳು 🔴 ಸಿನಿಮಾ & ಮನರಂಜನೆ 🔴 ಕ್ರೀಡಾ ಸುದ್ದಿ 🔴 ಉದ್ಯೋಗ & ಶಿಕ್ಷಣ ಮಾಹಿತಿ 🔴 ವೈರಲ್ ಮತ್ತು ಟ್ರೆಂಡಿಂಗ್ ಸುದ್ದಿಗಳು 🔴 ವಿಶೇಷ ವರದಿಗಳು ಮತ್ತು ಜನರ ಧ್ವನಿ ನಿಮಗೆ ಅಗತ್ಯವಿರುವ ಸುದ್ದಿಗಳನ್ನು ಸರಳ ಕನ್ನಡದಲ್ಲಿ, ವೇಗವಾಗಿ ಮತ್ತು ಜವಾಬ್ದಾರಿಯುತವಾಗಿ ತಲುಪಿಸುವುದು ನಮ್ಮ ಉದ್ದೇಶ. 📺 National Nandi News – ನಿಮ್ಮ ಸುದ್ದಿ, ನಿಮ್ಮ ಧ್ವನಿ!

Leave a Reply

Your email address will not be published. Required fields are marked *